ಗುರುವಾರ, ಅಕ್ಟೋಬರ್ 8, 2009

’ಯಾದ್ ವಶೇಮ್’ ಗುಂಗಿನಲ್ಲಿ....

ಕಾರ್ಪೋರೇಷನ್ ಸರ್ಕಲ್ಲಿನ ಎರಡೆರಡು ಸಿಗ್ನಲ್ಲುಗಳನ್ನು ದಾಟಿಕೊಂಡು ಬನ್ನಪ್ಪ ಗಾರ್ಡನ್ನಿನ ಪಕ್ಕದ ರಸ್ತೆಯಲ್ಲಿ ಕಾವೇರಿಭವನದ ಎದುರಿಗೆ ಬರುತ್ತಿದ್ದ ಹಾಗೇ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕೆಂಪು ಸಿಗ್ನಲ್ಲು. ನಿಲ್ಲಿಸಿದೆ ಬೈಕು. ೧೧೨ ಸೆಕೆಂಡು ಬಾಕಿ!  ಗಾಡಿ ಆಫ್ ಮಾಡಿದೆ. . ಎಡಗಡೆ ವೀರಾಂಜನೇಯ ಸ್ವಾಮಿ ದೇವಸ್ಥಾನ. ಅದು ಯಲಹಂಕ ಬಾಗಿಲಂತೆ! ಅದರ ಈಚೆ ಕಡೆ ರಾಜಕುಮಾರ್ ಹೆಬ್ಬಾಗಿಲು, ಆಚೆ ವಿಶ್ವೇಶ್ವರಯ್ಯ ಹೆಬ್ಬಾಗಿಲು ಎಂದು ದೊಡ್ಡದಾಗಿ ಬರೆದಿರುವ ಕಮಾನುಗಳು. ಅದರ ಮೂಲಕ ಅವೆನ್ಯೂ ರಸ್ತೆಗೆ ಪ್ರವೇಶ. ಬಲಬದಿಯಲ್ಲೊಂದು ಟ್ರಾಫಿಕ್ ಪೋಲೀಸ್ ಗೂಡು. ಖಾಲಿ ಇದೆ. ಅಲ್ಲೇ ದೇವರ್ಯಾವುದೆಂದು ಗೊತ್ತಾಗದ ಗುಡಿಯೊಂದಿದೆ. ಮುಂದೆ ಬಿಳಿ ಗೋಡೆಯ ಕಪ್ಪು ಕಂಡಿಗಳ ಎತ್ತರದ ಮೈಸೂರು ಬ್ಯಾಂಕು. ಆಕಡೆ ಈಕಡೆ ಬೆಂಗಳೂರು ವಿಶ್ವವಿದ್ಯಾಲಯದ ಕೆಂಪು ಕೆಂಪು ಕಟ್ಟಡಗಳು. ಮಹಾನಗರ ಪಾಲಿಕೆ ಗೋಡೆಗಳ ಮೇಲೆಲ್ಲಾ ಸುಂದರ ಕುಂಚ ಚಿತ್ತಾರ. ವಿಧಾನಸೌಧ ಕಡೆಯಿಂದ ಬರುವ ರಸ್ತೆಯಿಂದ ಅವೆನ್ಯೂ ರಸ್ತೆಗೆ ಹರಿಯುತ್ತಿವೆ ವಾಹನಗಳು. ಆತಂಕದಲ್ಲಿ ರಸ್ತೆ ದಾಟುತ್ತಿದ್ದಾರೆ ಜನ.
*****

ಆಗಸ್ಟ್ ೯, ೧೯೪೨, ಕ್ವಿಟ್ ಇಂಡಿಯಾ ಚಳುವಳಿ. ಗಾಂಧೀಜಿ ಸಮಗ್ರ ರಾಷ್ಟ್ರಕ್ಕೆ ಕರೆಕೊಟ್ಟಿದ್ದರು. ಗಾಂಧಿಯವರನ್ನು, ಇತರ ಮುಖಂಡರನ್ನು ಬೆಳಗ್ಗೆ ಬಂಧಿಸಿದ್ದರು. ಸುದ್ದಿ ತಿಳಿದದ್ದೇ ತಡ, ಚಿಕ್ಕಲಾಲ್ ಬಾಗ್ ನಲ್ಲಿ ಸಾರ್ವಜನಿಕ ಸಭೆ ಸೇರಿತ್ತು. ಎಚ್.ಸಿ.ಸೂರ್ಯನಾರಾಯಣ ರಾವ್, ಕೆಂಗಲ್ ಹನುಮಂತಯ್ಯ, ಎಸ್.ಡಿ.ಶಂಕರ್, ಕೆ.ರಾಮಸ್ವಾಮಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಬಂಧನವನ್ನು ಖಂಡಿಸಿದ್ದರು. ’ಭಾರತ ಬಿಟ್ಟು ತೊಲಗಿ’ ಕರೆಕೊಟ್ಟಿದ್ದರು. ಅದೋ ವಿಧ್ಯಾರ್ಥಿಗಳು ತರಗತಿಗಳಿಂದ ಹೊರಬಂದರು. ಸೆಂಟ್ರಲ್ ಕಾಲೇಜಲ್ಲಿ ಓದೋ ನನ್ನ ಗೆಳೆಯರ ಅಣ್ಣಂದಿರೇನೋ ಮೆರವಣಿಗೆ ಹೊರಡ್ತಾರೆ ಅಂತಾ ಗೊತ್ತಾಗಿ ನಾನೂ ದೌಡಾಯಿಸಿದೆ. ಮೈಸೂರು ಬ್ಯಾಂಕ್ ಚೌಕದಲ್ಲಿ ನಿಷೇದಾಜ್ಞೆ. ನಾವೋ ’ಬ್ರಿಟಿಷರೆ ಭಾರತ ಬಿಟ್ಟು ತೊಲಗಿ’ ಕೂಗು ಹಾಕಿಕೊಂಡು ಬರುತ್ತಾ ಇದ್ದೇವೆ. ಪೋಲೀಸರು ಬಂದರು, ದೊಣ್ಣೆ ಹಿಡಿದು ಬಡಿದರು. ಕುದುರೆ ಮೇಲಿನ ಪೋಲೀಸರು ನಮ್ಮ ಮೇಲೆ ಕುದುರೆ ದೌಡಾಯಿಸಿದಾಗ ಸತ್ತೆನೋ ಕೆಟ್ಟೆನೋ ಅಂತಾ ಓಡಲೆತ್ನಿಸಿದೆ. ಕಾಲಿಗೆ ಬಲವಾದ ಏಟು ಬಿದ್ದು ನರಳುವಂತಾಯಿತು. ಎಲ್ಲರನ್ನೂ ಬಂಧಿಸಿ ಸೆಂಟ್ರಲ್ ಜೈಲಿಗೆ ಒಯ್ದರು. ಕುದುರೆ ಮೇಲೆ ಪೋಲೀಸರ ನೋಡಿ, ಎಷ್ಟೋ ಕಡೆ ಅಕ್ಕಪಕ್ಕದ ರಸ್ತೆಯಲ್ಲಿದ್ದ ಹೆಂಗಸರು ಮೊರದಲ್ಲಿ ರಾಗಿ ಬೀದಿಗೆ ಎರಚಿದ್ದರು. ಕುದುರೆಗಳೂ ಜಾರಿ ಜಾರಿ ಬೀಳತೊಡಗಿದವು. ...........

********

’ಯಾದ್ ವಶೇಮ್’ ಪುಸ್ತಕದ ಗುಂಗಿನಲ್ಲಿದ್ದ ನನಗೆ ಅದರಲ್ಲಿದ್ದ ಈ ಸಾಲುಗಳು ನೆನಪಿಗೆ ಬಂದವು. ಆಗಿನ ಮೈಸೂರು ಬ್ಯಾಂಕ್ ಸರ್ಕಲ್ ಹೇಗಿತ್ತು. ಎಲ್ಲಿಂದ ಬಂದಿರಬಹುದು ಮೆರವಣಿಗೆ. ಅದರಲ್ಲಿದ್ದ ಪ್ರತಿಯೊಬ್ಬನಲ್ಲೂ ದೇಶ ಸ್ವತಂತ್ರವಾಗಬೇಕೆಂಬ ಛಲ. ’ಭಾರತ ಬಿಟ್ಟು ತೊಲಗಿ’ ಘೋಷಣೆ. ಈಚೆ ಕಡೆಯಿಂದ ಕುದುರೆ ಮೇಲೆ ಬಂದ ಬ್ರಿಟಿಷರು. ಬಡಿಯುತ್ತಿದ್ದಾರೆ ಹೋರಾಟಗಾರರನ್ನು.. ಚದುರಿದ ಮೆರವಣಿಗೆಯಿಂದ ಜನ ಕಿತ್ತೂ ಬಿದ್ದೂ ಓಡುತ್ತಿದ್ದಾರೆ. ನಾವು ನಿಂತು ನೋಡುತ್ತಿದ್ದೇವೆ. ಎಲ್ಲಾ ಅಸ್ಪಷ್ಟ. ಇನ್ನು ೧೦ ಸೆಕೆಂಡು ಬಾಕಿ. ಹಸಿರು ದೀಪ ಬೀಳುತ್ತದೆ.

12 ಕಾಮೆಂಟ್‌ಗಳು:

ಶಾಂತಲಾ ಭಂಡಿ (ಸನ್ನಿಧಿ) ಹೇಳಿದರು...

ವಿಕಾಸ...
ಚಂದ ಚಂದ ಬರದ್ದೆ. ರಾಶೀ ಇಷ್ಟ ಆತು.

Unknown ಹೇಳಿದರು...

ऒळ्ळॆय नॆनपु मत्तु तळकु

मॊग्य्म्बॊगॆ मजा बन्तु

shivu.k ಹೇಳಿದರು...

ಬರಹ ಚೆನ್ನಾಗಿದೆ...

Unknown ಹೇಳಿದರು...

ನಿಮ್ಮ ವಿವರೆಣೆ ಕೇಳಿದ ಮೇಲೆ ನನಗೂ ಓದ ಬೇಕು ಎ೦ದು ಅನ್ನಿಸುತ್ತಾ ಇದೆ .. ಇವತ್ತೇ ಹೋಗಿ ಪುಸ್ತಕ ಖರೀದಿಸುತ್ತೇನೆ
ಥ್ಯಾಂಕ್ಸ್ .

PARAANJAPE K.N. ಹೇಳಿದರು...

ಚೆನ್ನಾಗಿದೆ. ನಿಮ್ಮ ಬರಹ ಓದಿದ ಮೇಲೆ ’ಯಾದ್ ವಶೇಮ್’ ಪುಸ್ತಕ ಓದಲೆಬೇಕೆನ್ನುವ ಮನಸಾಗಿದೆ.

Sushrutha Dodderi ಹೇಳಿದರು...

hmmm..

ಸುಧೇಶ್ ಶೆಟ್ಟಿ ಹೇಳಿದರು...

ವಿಕಾಸ್....

ಮೊನ್ನೆ ರ೦ಗಶ೦ಕರಕ್ಕೆ ಹೋಗಿದ್ದಾಗ ಈ ಪುಸ್ತಕವನ್ನು ಅಲ್ಲಿ ಕ೦ಡಿದ್ದೆ.... ತೆಗೆದುಕೊಳ್ಳೋಣ ಎನಿಸಿದರೂ ಏನೋ ವಿಚಿತ್ರ ಹೆಸರಿದೆಯಲ್ಲ ಅ೦ತ ತೆಗೆದುಕೊಳ್ಳದೆ ವಸುಧೇ೦ದ್ರರ ಪುಸ್ತಕವೊ೦ದನ್ನು ಖರೀದಿಸಿದ್ದೆ....

ಈಗ ಈ ಪುಸ್ತಕವನ್ನು ತೆಗೆದುಕೊಳ್ಳಬೇಕೆ೦ಬ ಮನಸಾಗಿದೆ...

ashwath ಹೇಳಿದರು...

ವಿಕಾಸ
ಚಂದ ಬರದ್ಯೊ.ಒಮ್ಮೆ ಓದಿದ್ದೆ. ಈಗ ಮತ್ತೆ ಓದಲೇಬೇಕು ಅನ್ನಿಸ್ತಿದ್ದು. ಅದೆ ಅಲ್ವ ನೇಮಿಚಂದ್ರ ಬರವಣಗೆ ಅಂದ್ರೆ, ಮತ್ತೆ ಮತ್ತೆ ಓದುವ ಹಂಗಿರ್ತು.ಧನ್ಯವಾದಗಳು
ಕುಸುಮಾ ಸಾಯಿಮನೆ

ಅನಾಮಧೇಯ ಹೇಳಿದರು...

yaad vashEm naanu Odida atyuttama pustakagalalli ondu... matte nenapu maadikottiddeeya.. innondsala Odkeega

jomon varghese ಹೇಳಿದರು...

ಚೆನ್ನಾಗಿದೆ.

ಅನಾಮಧೇಯ ಹೇಳಿದರು...

This is really good :)

ವಿ.ರಾ.ಹೆ. ಹೇಳಿದರು...

thank you all,

will b back soon..