ಮಹಾರಾಷ್ಟ್ರವು ಶಿಕ್ಷಣದಲ್ಲಿ ದ್ವಿಭಾಷಾ ನೀತಿಗೆ ಮರಳಿದೆ ಎಂದು 24 ಏಪ್ರಿಲ್ 'ವಾಚಕರ ವಾಣಿ'ಯಲ್ಲಿ ಓದುಗರೊಬ್ಬರ ಓಲೆಯಲ್ಲಿ ಪ್ರಕಟವಾಗಿದೆ. ಆದರೆ ವಾಸ್ತವೇನೆಂದರೆ ಈವರೆಗೂ ಮಹಾರಾಷ್ಟ್ರದ ರಾಜ್ಯಪಠ್ಯಕ್ರಮದ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ದ್ವಿಭಾಷಾ ನೀತಿಯೇ ಇತ್ತು. ಆದರೆ ಹೊಸ ಶಿಕ್ಷಣ ನೀತಿಯ ಪ್ರಕಾರ ಒಂದನೇ ತರಗತಿಯಿಂದಲೇ ಮೂರನೇ ಭಾಷೆಯಾಗಿ ಹಿಂದಿಯನ್ನೇ ಕಲಿಯಬೇಕೆಂದು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ. ಬದಲಾಗಿ ಎನ್. ಇ.ಪಿ.ಯಲ್ಲಿರುವಂತೆ ಯಾವುದಾದರೂ ಭಾರತೀಯ ಭಾಷೆಯನ್ನು ಮೂರನೇ ಭಾಷೆಯಾಗಿ ಕಲಿಯಬಹುದು ಎಂದಿದೆ. ಇದು ಕೂಡ ಪರೋಕ್ಷವಾಗಿ ಹಿಂದಿ ಹೇರಿಕೆಯ ಉದ್ದೇಶವೇ ಆಗಿದೆ. ಹೇಗೆಂದರೆ, ಮೂರನೇಭಾಷೆ ಕಡ್ಡಾಯಗೊಳಿಸಿದರೆ ಬಹುತೇಕ ಎಲ್ಲಾ ಶಾಲೆಗಳೂ ಕೂಡ ಹಿಂದಿಯನ್ನು ಮಾತ್ರವೇ ಮೂರನೇ ಭಾಷೆಯಾಗಿ ಆಯ್ಕೆ ಒದಗಿಸುತ್ತವೆ. ಇಂತಹ ಸಂದರ್‍ಭದಲ್ಲಿ ಮಕ್ಕಳು ಅನಿವಾರ್‍ಯವಾಗಿ ಹಿಂದಿಯನ್ನೇ ಕಲಿಯಬೇಕಾಗುತ್ತದೆ. ಕೆಲವು ಶಾಲೆಗಳಲ್ಲಿ ಸಂಸ್ಕೃತದ ಆಯ್ಕೆ ಇರಬಹುದಷ್ಟೆ. ಹಾಗಾಗಿ ಈ ಮೂರನೇ ಭಾಷೆ ಎಂಬುದೇ ಹಿಂದಿಯನ್ನು ತರುವ ಯೋಜನೆಯ ಭಾಗವಾಗಿದೆ. ಇದುವರೆಗೂ ಐದನೇ ತರಗತಿಯಿಂದ ಇದ್ದ ಈ ಮೂರನೇ ಭಾಷೆಯು ಈಗ ಒಂದನೇ ತರಗತಿಯಿಂದ ಕಲಿಯಬೇಕಾಗಿರುವುದು ಮಕ್ಕಳಿಗೆ ಹೊರೆಯಾಗುವುದು ಖಂಡಿತ. ಜೊತೆಗೆ ಇದು ಬಾಲ್ಯದಿಂದಲೇ ಎಲ್ಲರೂ ಹಿಂದಿಯನ್ನು ಒಪ್ಪಿಕೊಳ್ಳಬೇಕೆಂಬ ದೊಡ್ಡ ಯೋಜನೆಯಾಗಿರುವುದು ಸ್ಪಷ್ಟವಾಗಿದೆ.
ಕರ್‍ನಾಟಕದ ರಾಜ್ಯಪ್ರಠ್ಯಕ್ರಮದ ಶಾಲೆಗಳಲ್ಲಿ ಪ್ರೌಢಶಾಲೆಯಲ್ಲಿ ತ್ರಿಭಾಷಾ ಸೂತ್ರ ಇದ್ದು ಬಹುತೇಕ ಶಾಲೆಗಳಲ್ಲಿ ಇದೇ ತರಹ ಅನಿವಾರ್‍ಯ ಹಿಂದಿ ಆಯ್ಕೆ ಇರುವುದನ್ನು ಕಾಣಬಹುದು. ಇದನ್ನು ಅರಿತೇ ತಮಿಳುನಾಡು ಮೊದಲಿಂದಲೂ ದ್ವಿಭಾಷಾ ನೀತಿಯನ್ನು ಪಾಲಿಸುತ್ತಿದೆ ಮತ್ತು ಈಗಲೂ ತ್ರಿಭಾಷಾ ನೀತಿಯನ್ನು ಒಪ್ಪಿಕೊಳ್ಳಲು ತಯಾರಾಗಿಲ್ಲ. ಯಾವುದೇ ಹಿಂದಿರಾಜ್ಯ ಅಥವಾ ಉತ್ತರಭಾರತದ ಯಾವುದೇ ರಾಜ್ಯವೂ ಕೂಡ ತಾವು ದಕ್ಷಿಣದ ಭಾಷೆಗಳನ್ನು ತಮ್ಮ ಪ್ರಾಥಮಿಕ ಶಿಕ್ಷಣದಲ್ಲಿ ಪರಿಚಯಿಸುತ್ತೇವೆ ಎಂದು ಇದುವರೆಗೆ ಮುಂದಡಿ ಇಟ್ಟಿಲ್ಲ. ಆ ಬಗ್ಗೆ ಯೋಚನೆಯೂ ಸಹ ಇದ್ದಂತಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್‍ಕಾರವು ಹೀಗೆ ಅತಿ ಉತ್ಸಾಹದಿಂದ ಹಿಂದಿ ಕಡ್ಡಾಯ ಮಾಡಹೊರಟು ಪ್ರತಿರೋಧ ಬಂದಾಗ ಕೊಂಚ ಹಿಂದೆ ಸರಿದಂತೆ ಮಾಡಿ ಪರೋಕ್ಷವಾಗಿ ಹಿಂದಿಯನ್ನು ಪ್ರಾಥಮಿಕ ಹಂತದಲ್ಲೇ ಹೇರುವ ಪ್ರಯತ್ನವನ್ನು ಪ್ರಾರಂಭಿಸಿರುವುದು ಎಚ್ಚರಿಕೆಯ ಗಂಟೆಯೆಂದೇ ಹೇಳಬಹುದು. ಇದು ಎನ್. ಇ. ಪಿ. ಯ ಉದ್ದೇಶವನ್ನು ಪ್ರಶ್ನೆ ಮಾಡುವಂತಾಗಿದೆ ಮತ್ತು ಅದನ್ನು ಹಿಂದಿ ಹೇರಿಕೆಯ ಹುನ್ನಾರವನ್ನಾಗಿ ಕಾಣುವಂತಾಗಿದೆ.

***********
ಸದ್ಯದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್‍ಕಾರವು ಮತ್ತೊಮ್ಮೆ ತ್ರಿಭಾಷಾ ಕಲಿಕೆಯ ಆದೇಶ ಹೊರಡಿಸಿತು. ಅದರಲ್ಲಿ ಹಿಂದಿ ಬಿಟ್ಟು ಬೇರೆ ಆಯ್ಕೆ ಬೇಕಾದರೆ ಕನಿಷ್ಟ ೨೦ ಮಕ್ಕಳು ಇರಬೇಕು. ಅದಕ್ಕೆ ಆನ್ ಲೈನ್ ಕಲಿಕೆ ವ್ಯವಸ್ಥೆ ಮಾಡಬೇಕು ಎಂದು ಸೇರಿಸಲಾಗಿತ್ತು. ಆದರೆ ಇದಕ್ಕೂ ಸಹ ಮಹಾರಾಷ್ಟ್ರದಲ್ಲಿ ಪ್ರಬಲ ವಿರೋಧ ವ್ಯಕ್ತವಾದ ಕಾರಣ ಈ ಆದೇಶವನ್ನು ರದ್ದುಪಡಿಸಿದೆ.